ಉಚಿತ ಹೊಲಿಗೆ ಯಂತ್ರ ಯೋಜನಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ! Free Sewing Machine Scheme in Karnataka
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ನೀವು ಕೂಡ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರೆ ಈ ಒಂದು ಲೇಖನದಲ್ಲಿ ನಾವು ನಿಮಗೆ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳು ಬೇಕು? (Free Sewing Machine Scheme in Karnataka) ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ? ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಹಾಗೂ ಇನ್ನಿತರ ಎಲ್ಲಾ ಪ್ರಶ್ನೆಗಳಿಗೆ ಈ ಒಂದು ಲೇಖನದಲ್ಲಿ ತಮಗೆಲ್ಲರಿಗೂ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನಾವು ನೀಡಲಿದ್ದೇವೆ ಸಂಪೂರ್ಣವಾಗಿ ಓದಿರಿ.
Table of Contents
ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರ ಜೀವನೋಪಾಯಕ್ಕಾಗಿ (Free Sewing Machine Scheme in Karnataka) ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರವನ್ನು ನೀಡಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವಂತಹ ಕುಶಲಕರ್ಮಿಗಳಿಗೆ ಅವರ ಉದ್ಯೋಗಕ್ಕೆ ಉಪಯೋಗವಾಗುವಂತಹ ಉಪಕರಣಗಳನ್ನು ಕೇಂದ್ರ ಸರ್ಕಾರದಿಂದ ನೀಡಲು ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಈ ಯೋಜನೆಗೆ ಅರ್ಹ ಮತ್ತು ಆಸಕ್ತಿಯುಳ್ಳ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
Free Sewing Machine Scheme ಈ ಯೋಜನೆಯ ಸಂಪೂರ್ಣ ಮಾಹಿತಿ:
ಮೇಲ್ಕಂಡ ಈ ಎರಡು ಯೋಜನೆಗಳ ಮೂಲಕ ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ನೀಡುವ ಸಲುವಾಗಿ ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಅರ್ಹ ಮಹಿಳೆಯರಿಂದ ಎರಡು ಯೋಜನೆಗಳಿಗೆ ಕರ್ನಾಟಕ ರಾಜ್ಯದ ಅಧಿಕೃತ ವೆಬ್ಸೈಟ್ ಆದ ಸೇವಾ ಸಿಂಧು ಜಾಲತಾಣದ ಮೂಲಕ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕದೊಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಖಾತರಿ ಇಲ್ಲದೆ ಅಂದರೆ ಯಾವುದೇ ರೀತಿಯ ದಾಖಲೆಗಳನ್ನು ಅಡ ಇಡದೆ ಸಾಲವನ್ನು ಪಡೆದುಕೊಳ್ಳುವ ಸೌಲಭ್ಯವು ಈ ಯೋಜನೆ ಅಡಿಯಲ್ಲಿ ಸಿಗಲಿದೆ. ಮತ್ತು ಈ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ಕೂಡ ಫಲಾನುಭವಿಗಳು ಪಡೆದುಕೊಳ್ಳಬಹುದಾಗಿದೆ.
ಈ ಒಂದು ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಟೂಲ್ ಕಿಟ್ಟನ್ನು ಖರೀದಿ ಮಾಡಲು ಕೇಂದ್ರ ಸರ್ಕಾರವು ಸುಮಾರು 15000 ಸಾವಿರ ರೂಪಾಯಿಗಳವರೆಗೆ ಸಹಾಯಧನವನ್ನು ಸಹ ಕೊಡುತ್ತದೆ. ಮತ್ತು ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿಗಳಿಗೆ 5 ರಿಂದ 7 ದಿನಗಳವರೆಗೆ ಉಚಿತ ಟ್ರೈನಿಂಗ್ ಅನ್ನು ಸಹ ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಯ ಮಾಲದಂಡಗಳು:
- ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕಾಗಿರುತ್ತದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಟೈಲರಿಂಗನ್ನು ತನ್ನ ಸ್ವಯಂ ಉದ್ಯೋಗವನ್ನಾಗಿ ಮಾಡುತ್ತಿರಬೇಕು.
- ಅಂದು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ರಾಜ್ಯ ಸರ್ಕಾರದಿಂದಾಗಲಿ ಅಥವಾ ಕೇಂದ್ರ ಸರ್ಕಾರದಿಂದಾಗಲಿ ಯಾವುದೇ ರೀತಿಯ ಸಾಲ ಸೌಲಭ್ಯವನ್ನು ಪಡೆದುಕೊಂಡಿರಬಾರದು.
- ಈ ಒಂದು ಯೋಜನೆಗೆ ಸರ್ಕಾರಿ ನೌಕರರಿಗೆ ಆಗಲಿ ಅಥವಾ ಅವರ ಕುಟುಂಬದಲ್ಲಾಗಲಿ ಯಾರಿಗೂ ಸಹ ಅರ್ಜಿ ಸಲ್ಲಿಸಲು ಅರ್ಹತೆ ಇರುವುದಿಲ್ಲ.
ಇದನ್ನೂ ಓದಿ: Ration Card: ರೇಷನ್ ಕಾರ್ಡ್ ಹೊಂದಿರುವ ಎಲ್ಲರಿಗೂ ಗುಡ್ ನ್ಯೂಸ್! ಮನೆ ನಿರ್ಮಾಣಕ್ಕೆ ಅನುದಾನ ಅನುದಾನ! ಇಲ್ಲಿದೆ ಮಾಹಿತಿ
ಬೇಕಾಗುವ ಪ್ರಮುಖ ದಾಖಲೆಗಳು:
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ರೇಷನ್ ಕಾರ್ಡ್ (ಕಡ್ಡಾಯ)
- ವಯಸ್ಸಿನ ದೃಢೀಕರಣ ಪತ್ರ
- ಅಭ್ಯರ್ಥಿಯ ಭಾವಚಿತ್ರ
- ಮೊಬೈಲ್ ನಂಬರ್
ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ:
ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಮತ್ತು ಈ ಯೋಜನೆಯಡಿಯಲ್ಲಿ ಲಾಭವನ್ನು ಪಡೆದುಕೊಳ್ಳಲು ಬಯಸಿದರೆ ಮೊದಲನೆಯದಾಗಿ ನೀವು PM Vishwakarma Scheme ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ನಿಮ್ಮ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗೆ ತೆರಳಿ ಮತ್ತು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ತೆರಳುವ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
Free Sewing Machine Scheme ಪ್ರಮುಖ ಲಿಂಕ್ ಗಳು:
ಅರ್ಜಿ ಸಲ್ಲಿಸಲು ಅಧಿಕೃತ ಲಿಂಕ್ | Apply Here |
ಅಧಿಕೃತ ಜಾಲತಾಣದ ಲಿಂಕ್ | https://pmvishwakarma.gov.in/ |